ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಪಟ್ಟಣದಲ್ಲಿ ಪ್ರತಿಭಟನೆ

ಮೊಳಕಾಲ್ಮುರು: ಬೆಳಗಾವಿಯಲ್ಲಿ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂಘದ ತಾಲೂಕು ತಾಲೂಕು ಅಧ್ಯಕ್ಷರಾದ ಆರ್ ಜಿ ಜಯಕುಮಾರ್ ಇವರು ಮಾತನಾಡಿ, ಸಂವಿಧಾನಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡಬೇಕು. ಲಾಠಿಚಾರ್ಜ್ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಮತ್ತು ಬಂಧಿಸಿರುವ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹೋರಾಟದಲ್ಲಿ ಸಂಘದ ತಾಲೂಕು ಗೌರವಾಧ್ಯಕ್ಷರಾದ ಚಂದ್ರಶೇಖರ್ ಗೌಡ ಮಾತನಾಡಿ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಲಾಠಿಚಾರ್ಜ್ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ಬೆಳಗಾವಿಯಲ್ಲಿ ಬಂಧಿಸಿರುವ ಪಂಚಮಸಾಲಿ ಸಮಾಜದ ಹೋರಾಟಗಾರರನ್ನು ಕೂಡಲೇ ಷರತ್ತು ರಹಿತವಾಗಿ ಬಿಡುಗಡೆಗೊಳಿಸಬೇಕು. ವೀರಶೈವ ಲಿಂಗಾಯತ ಸಮಾಜವನ್ನು ಕೇಂದ್ರದಲ್ಲಿ ಒಬಿಸಿಗೆ ಸೇರಿಸುವಂತೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಂಪುರ ನಾಗರಾಜ, ಅಮಕುಂದಿ ಪ್ರಭಾಕರ್, ನಾಗಸಮುದ್ರ ಸುಧಾಕರ್, ಪಂಚಮಸಾಲಿ ತಾಲೂಕು ಯುವ ಘಟಕ ಅಧ್ಯಕ್ಷರಾದ ವಿನಯ್ ಕುಮಾರ್ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್,ರಮೇಶ್, ಮೃತ್ಯುಂಜಯ,ಆರ್ಕರ್ ಗಂಗಾಧರ, ಬಳೆ ಗಂಗಾಧರ,ಹೊಸಹಳ್ಳಿ ಹರೀಶ್,ಜೆಬಿ ಹಳ್ಳಿ ಮಹೇಶ್ ಮತ್ತು ಸಮಾಜದ ಮುಖಂಡರು ಇದ್ದರು.

Edited By : Manjunath H D
PublicNext

PublicNext

12/12/2024 04:19 pm

Cinque Terre

16.48 K

Cinque Terre

0

ಸಂಬಂಧಿತ ಸುದ್ದಿ