ಬೆಳಗಾವಿ: ರಾಜ್ಯಾದ್ಯಂತ ಪರವಾನಗಿ ಭೂಮಾಪಕರಾಗಿ ಸತತವಾಗಿ 20 ವರ್ಷಗಳಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಮನವಿಯನ್ನು ಸರ್ಕಾರ ಈ ಕೂಡಲೇ ಪರಿಗಣಿಸಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲಾಯಿತು.
ಇಂದು ಸುವರ್ಣಸೌಧದ ಸುವರ್ಣ ಉದ್ಯಾನದ ಬಳಿ ಕರ್ನಾಟಕ ರಾಜ್ಯ ಪರವಾನಗಿ ಭೂಮಾಪಕರ ಸಂಘದಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಭೂಮಾಪನ ಇಲಾಖೆಯಲ್ಲಿ ಪರವಾನಗಿ ಭೂಮಾಪಕರನ್ನು ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಿಬೇಕು. ಕನಿಷ್ಠ ವೇತನ ಮತ್ತು ಸೇವಾ ಭದ್ರತೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಈವರೆಗೂ ನೀಡಬೇಕು. ಆರೋಗ್ಯ ವಿಮೆ, ಜೀವ ವಿಮೆ, ಅಪಘಾತ ವಿಮೆ, ಜೀವ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
PublicNext
12/12/2024 04:21 pm