ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಸಾಧನೆ: ಥೈಲ್ಯಾಂಡ್ ದೇಶದಲ್ಲಿ ಯೋಗದಲ್ಲಿ ಶ್ರೀಧರ್ ಕಮಾಲ್!

ಹುಬ್ಬಳ್ಳಿ: ಯೋಗಾಸನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗಪಟು ಡಾ.ಶ್ರೀಧರ್ ಹೊಸಮನಿ ಮಹತ್ವದ ಸಾಧನೆ ಮಾಡಿದ್ದಾರೆ. ಥೈಲ್ಯಾಂಡ್ ದೇಶದಲ್ಲಿ ನಡೆದ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಾಂಪಿಯನ್‌ಶಿಪ್‌ ನಲ್ಲಿ ದ್ವಿತೀಯ ಸ್ಥಾನ ಪಡೆದು ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಥೈಲ್ಯಾಂಡ್ ಯೂಥ್ ಯೋಗ ಅಸೋಸಿಯೇಷನ್‌, ವರ್ಲ್ಡ್ ಯೂಥ್ ಯೋಗ ಫೆಡರೇಶನ್, ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಡಿ.9ರಂದು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6 ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ಇನ್ನೂ ಯೋಗದಲ್ಲಿ ಸಾಕಷ್ಟು ಸಾಧನೆ‌ ಮಾಡಿರುವ ಕುಸುಗಲ್ ಗ್ರಾಮದ ಡಾ.ಶ್ರೀಧರ್ ಹೊಸಮನಿಯವರು, ಈಗ ಥೈಲ್ಯಾಂಡ್ ದೇಶದಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ದ್ವಿತೀಯ ಸ್ಥಾನ ಪಡೆದು ಧಾರವಾಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/12/2024 04:47 pm

Cinque Terre

27.25 K

Cinque Terre

2

ಸಂಬಂಧಿತ ಸುದ್ದಿ