ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಿ.15ರಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಪ್ರಥಮ ವಾರ್ಷಿಕೋತ್ಸವ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕಗಳ ಉದ್ಘಾಟನಾ ಸಮಾರಂಭ ಡಿ.15ರಂದು ಬೆಂಗಳೂರಿನ ಶೇಷಾದ್ರಿಪುರಂ ಕುಮಾರ ಪಾರ್ಕ್ ಗಾಂಧಿ ಭವನದ ಬಾಪೂಜಿ ಸಭಾಂಗಣದಲ್ಲಿ ಜರುಗಲಿದೆ ಎಂದು ವೇದಿಕೆಯ ಮುಖ್ಯಸ್ಥರಾದ ಪ್ರಶಾಂತ ಬಗಲಿ, ಧಾರವಾಡ ಜಿಲ್ಲಾಧ್ಯಕ್ಷ ವೈ.ಎನ್. ಪಾಟೀಲ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸುವರು ಎಂದರು.

ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ ನಾಗರಾಜ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಸಬ್ಬಲಿ ರಾಯಚೂರ, ಬೆಂಗಳೂರು ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ ಬೆಳ್ಳೂರ, ಉತ್ತರ ಕರ್ನಾಟಕ ಹೋರಾಟ ವೇದಿಕೆ ರಾಜ್ಯಾಧ್ಯಕ್ಷ ಭೀಮಪ್ಪ ಗಡಾದ, ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಕೃಷ್ಣಮೂರ್ತಿ ಉಪಸ್ಥಿತರಿರುವರು ಎಂದು ಹೇಳಿದರು.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/12/2024 05:15 pm

Cinque Terre

8.9 K

Cinque Terre

0

ಸಂಬಂಧಿತ ಸುದ್ದಿ