ಅಥಣಿ : ತಾಲೂಕಿನ ಗಡಿನಾಡು ಬಳ್ಳಿಗೇರಿ ಗ್ರಾಮದಲ್ಲಿ ದಿನಾಂಕ 14 ರಂದು ಸಂಜೆ 6 ಗಂಟೆಗೆ ಜೈ ಕರ್ನಾಟಕ ಸಂಘಟನೆ ವತಿಯಿಂದ "ಗಡಿನಾಡು ಉತ್ಸವ "ಎಂಬ ಐತಿಹಾಸಿಕ ಕಾರ್ಯಕ್ರಮ ಜರುಗಲಿದೆ.ಈ ಕಾರ್ಯಕ್ರಮ ಉದ್ಘಾಟನೆಗೆ ಜೈ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ ಬಿ ಎನ್ ಜಗದೀಶ್ ಅಥಣಿಗೆ ಆಗಮಿಸುತ್ತಿದ್ದಾರೆ ಅಥಣಿ ತಾಲೂಕಿನ ಹಾಗೂ ಸುತ್ತಮುತ್ತಲಿನ ಕನ್ನಡ ಮನಸುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಜೈ ಕರ್ನಾಟಕ ಸಂಘಟನೆಯ ಅಥಣಿ ತಾಲೂಕು ಘಟಕದ ಅಧ್ಯಕ್ಷ ಆಕಾಶ ನಂದಗಾವ ಹೇಳಿದರು.
ಅವರು ಅಥಣಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಕಾರ್ಯಕ್ರಮಕ್ಕೆ ಸದ್ಗುರು ಅಭಿನವ ಗುರುಲಿಂಗ ಜಂಗಮ ಮಹಾರಾಜರು ಕಕಮರಿ ಮಠ ಇವರು ದಿವ್ಯ ಸಾನಿಧ್ಯ ವಹಿಸಲಿದ್ದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ ಬಿ ಎನ್ ಜಗದೀಶ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿಗಳು ಅಥಣಿ ಶಾಸಕರಾದ ಲಕ್ಷ್ಮಣ ಸವದಿ ಉದ್ಘಾಟನೆ ಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಕಾಗವಾಡ ಶಾಸಕ ರಾಜು ಕಾಗೆ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ, ಮಾಜಿ ಶಾಸಕರುಗಳಾದ ಶ್ರೀಮಂತ ಪಾಟೀಲ, ಮಹೇಶ್ ಕುಮಟಳ್ಳಿ, ಶಹಜಹಾನ್ ಡೊಂಗರಗಾವ, ಹಾಗೂ ಮುಖಂಡರಾದ ಚಂದ್ರಕಾಂತ ಇಮ್ಮಡಿ, ನಿಂಗಪ್ಪ ಕೊಕಲೆ,ಸದಾಶಿವ ಬುಟಾಳಿ ಗಜಾನನ ಮಂಗಸೂಳಿ, ಧರೆಪ್ಪ ಟಕ್ಕಣ್ಣವರ, ಶಿವು ಗುಡ್ಡಾಪುರ ಸೇರಿದಂತೆ ಅನೇಕ ಮುಖಂಡರು ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ವೇಳೆ ಅಥಣಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೊಡಕರ ಮಾತನಾಡಿ . ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ' ಜಯ ಕರ್ನಾಟಕ ರತ್ನ" ಪ್ರಶಸ್ತಿಯನ್ನು ನೀಡಲಿದ್ದು ಅನೇಕ ಜಾನಪದ ಕಲಾವಿದರು ಕಲಾತಂಡಗಳು ಆಗಮಿಸಲಿವೆ ಎಂದರು.
Kshetra Samachara
12/12/2024 05:18 pm