ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ, ವಿಪಕ್ಷಗಳ ಆರೋಪ ಸತ್ಯಕ್ಕೆ ದೂರ - ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ, ವಿಪಕ್ಷಗಳ ಆರೋಪ ಸತ್ಯಕ್ಕೆ ದೂರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. ಬಜೆಟ್‌ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇಕಡಾ 25ರ ಒಳಗಡೆಯೇ ಇದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂಪಾಯಿಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.

ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25 ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ರಾಜ್ಯ ಸರ್ಕಾರ 1ಲಕ್ಷದ 4 ಸಾವಿರ ಕೋಟಿ ರೂಗಳ ಸಾಲವನ್ನು ಮಾಡಲಾಗಿದ್ದು,ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ.‌ ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಎಸ್ ಸಿ ಪಿ/ಟಿಎಸ್ ಪಿಗಳಿಗೆ ಬಳಸಲಾಗಿರುವ ಹಣ 2017-18ನೇ ಸಾಲಿನಲ್ಲಿ 36 ಸಾವಿರ ಕೋಟಿ ರೂ.ಖರ್ಚು ಮಾಡಲಾಗಿದೆ. ಈ ವರ್ಷ 39, 272 ಕೋಟಿ ರೂ.ಗಳ ಅನುದಾನ ಇಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್ ಸಿ ಪಿ/ಟಿ ಎಸ್ ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆ ಏಕೆ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ ಸಿಎಂ, ಕೇಂದ್ರ ಸರ್ಕಾರ ಏಕೆ ಈ ಕಾಯ್ದೆ ಮಾಡಿಲ್ಲ ಎಂದು ವಿಧಾನ ಪರಿಷತ್‌ನಲ್ಲಿ ಪ್ರಶ್ನಿಸಿದರು.‌

Edited By : Vijay Kumar
PublicNext

PublicNext

12/12/2024 05:25 pm

Cinque Terre

8.85 K

Cinque Terre

0

ಸಂಬಂಧಿತ ಸುದ್ದಿ