ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ ಮಹಿಳಾ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರಪ್ರಸಾದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಇವರು 'ಭಾರತೀಯ ಪರಿಕಲ್ಪನೆಯಲ್ಲಿ ಮಾನವ ಹಕ್ಕುಗಳು' ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹ್ಯೂಮನ್ ರೈಟ್ಸ್ ಫೌಂಡೇಶನ್ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Kshetra Samachara
12/12/2024 05:37 pm