ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಯೋರ್ವರು ನೀಡಿದ ದೂರಿನ ಅನ್ವಯ ಭಾರತಿನಗರ ಠಾಣೆಯ ಕಾನ್ಸ್‌ಟೇಬಲ್ ಪೈಗಂಬರ್ ನದಾಫ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತಿನಗರ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೈಗಂಬರ್ ನದಾಫ್ ಇತ್ತೀಚೆಗೆ ಕ್ರೀಡಾ ಕೋಟಾದಲ್ಲಿ ಪಿಎಸ್ಐ ಆಗಿ ನೇಮಕವಾಗಿದ್ದ. ನೇಮಕಾತಿ ಪ್ರಕ್ರಿಯೆಗೆ ಪೈಗಂಬರ್ ನದಾಫ್ ಸಲ್ಲಿಸಿದ್ದ ಬಿ.ಎ ಪದವಿಯ ಅಂಕಪಟ್ಟಿ ನೈಜತೆಗೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕಳಿಸಲಾಗಿತ್ತು. ಪರಿಶೀಲನೆ ವೇಳೆ ಅಂಕಪಟ್ಟಿ ನಕಲಿ ಎಂಬುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಗಳು ವಿಧಾನಸೌಧ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
PublicNext
12/12/2024 06:10 pm