ಬೆಂಗಳೂರು : ಬೆಂಗಳೂರು ನಗರದಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಅಳವಡಿಸಲಾಗಿರುವ ಫಲಕಗಳಲ್ಲಿ ಕನ್ನಡ ಕಾಣೆಯಾಗಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಖಂಡಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನ ಹಲವಾರು ಸ್ಥಳಗಳಲ್ಲಿ ಅಳವಡಿಸಿರುವ ಮಾರ್ಗಸೂಚನಾ ಫಲಕಗಳಲ್ಲಿ ಕೇವಲ ಆಂಗ್ಲಭಾಷೆಯೇ ವಿಜೃಂಭಿಸುತ್ತಿರುವುದು ವಿಷಾದನೀಯವಾದ ಸಂಗತಿಯಾಗಿದೆ. ಸರ್ಕಾರದ ವ್ಯವಸ್ಥೆಯೇ ಕನ್ನಡದ ಕುರಿತಂತೆ ನಕಾರಾತ್ಮಕ ಧೋರಣೆಯನ್ನು ತಳೆಯುವುದು ಖಂಡನೀಯ ಎಂದಿದ್ದಾರೆ.
ಈ ಕುರಿತಂತೆ ಕೂಡಲೇ ತನಿಖೆ ನಡೆಸಿ ಕನ್ನಡ ವಿರೋಧಿ ಕೆಲಸ ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಾ.ಬಿಳಿಮಲೆ ಆಗ್ರಹಿಸಿದ್ದಾರೆ. ಅಲ್ಲದೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಬೆಂಗಳೂರು ನಗರ ಪೊಲೀಸ್ ಆಡಳಿತದಲ್ಲಿ ಕನ್ನಡ ಅನುಷ್ಠಾನದ ಕುರಿತಂತೆ ಶೀಘ್ರದಲ್ಲೇ ಪರಿಶೀಲನೆ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
PublicNext
12/12/2024 06:26 pm