ತುಮಕೂರು : ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ ಡಿಸೆಂಬರ್ 14 ರಂದು ಬೆಳಿಗ್ಗೆ 1೦-3೦ಕ್ಕೆ( ಸಾಹೇ ) ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ ಶ್ರೀಮತಿ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸಿತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ ವಿವರಿಸಿದರು.
Kshetra Samachara
12/12/2024 07:26 pm