ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 15 ಸಾವಿರ ವೇತನ ನಿಗದಿ ಮಾಡಲು ಒತ್ತಾಯ

ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂಪಾಯಿ ವೇತನ ನಿಗದಿ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಆಶಾ ಕಾರ್ಯಕರ್ತೆಯರಿಂದ ಒತ್ತಾಯ ಪೂರ್ವಕವಾಗಿ ಮೊಬೈಲ್ ಕೆಲಸಗಳನ್ನು ಮಾಡಿಸಬಾರದು. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಬೇಕು. ಕಳೆದ ಮೂರು ತಿಂಗಳಿನಿಂದ ಬಂದ್ ಆಗಿರುವ ಇಲಾಖೆಯ ಸಿಮ್‌ಗಳನ್ನು ಮರಳಿ ಪ್ರಾರಂಭಿಸಬೇಕು. 60 ವರ್ಷಕ್ಕೆ ಸೇವಾ ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 3 ಲಕ್ಷಕ್ಕೆ ಹೆಚ್ಚಿಸಬೇಕು. ತೀವ್ರ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟಿನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹ ಧನ ನೀಡಬೇಕು ಎಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು.

Edited By : Suman K
Kshetra Samachara

Kshetra Samachara

12/12/2024 07:47 pm

Cinque Terre

15.71 K

Cinque Terre

1

ಸಂಬಂಧಿತ ಸುದ್ದಿ