ಧಾರವಾಡ: ಪಂಚಮಸಾಲಿ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಲಾಠಿ ಚಾರ್ಜ್ ಮಾಡಿಸಿದ್ದು ಅಮಾನವೀಯ ನಡೆ ಎಂದು ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಮುಖಂಡ ವೀರೇಶ ಉಂಡಿ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಹೋರಾಟಗಾರರು ಇದ್ದ ಜಾಗಕ್ಕೆ ಸಿಎಂ ಬಂದು ಮನವಿ ಸ್ವೀಕರಿಸಿ ಪ್ರತಿಭಟನೆಗೆ ಸ್ಪಂದಿಸಿದ್ದೇ ಆಗಿದ್ದರೆ ಇಷ್ಟೆಲ್ಲ ಗದ್ದಲ, ಗಲಾಟೆಯೇ ಆಗುತ್ತಿರಲಿಲ್ಲ. ಆದರೆ, ಪೊಲೀಸರಿಂದ ಸಮಾಜದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು ನಿಜಕ್ಕೂ ಅಮಾನವೀಯ ಘಟನೆ. ಇದನ್ನು ಸಮಾಜ ಸಹಿಸುವುದಿಲ್ಲ ಎಂದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ನಾವು ನಮ್ಮ ಸ್ವಾಮೀಜಿ ನೇತೃತ್ವದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು ಎಂಬುದರ ರೂಪುರೇಷೆ ಸಿದ್ಧಪಡಿಸುತ್ತೇವೆ. ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.
Kshetra Samachara
12/12/2024 08:54 pm