ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಡ್ರೋನ್ ಪ್ರತಾಪ್ ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟಿಸಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಎಡವಟ್ಟು ಮಾಡಿಕೊಂಡಿದ್ದರು. ಈ ಸಂಬಂಧ ತುಮಕೂರು ಜಿಲ್ಲೆಯ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರತಾಪ್‌ರನ್ನು ಬಂಧಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 288 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಈ ಕಾಯ್ದೆ ಸಾರ್ವಜನಿಕ ಸುರಕ್ಷತೆಗೆ ಗಮನಾರ್ಹ ಅಪಾಯ ಮತ್ತು ಸ್ಫೋಟಕಗಳನ್ನು ನಿಯಂತ್ರಿಸುವ ಕಾನೂನುಗಳನ್ನು ಉಲ್ಲಂಘಿಸಿದೆ.
PublicNext
12/12/2024 10:36 pm