ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾರು, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ - ಮೂವರಿಗೆ ಗಂಭೀರ ಗಾಯ

ಧಾರವಾಡ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಮೂಲತಃ ಬೆಂಗಳೂರು ಮೂಲದವರಾದ ಮೂರು ಜನ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ನಾಲ್ಕೈದು ಜನ ಗೋವಾ ಕಡೆಯಿಂದ ಮರಳಿ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ ಕಡೆಯಿಂದ ಪುಣೆ ಕಡೆ ಹೋಗುತ್ತಿದ್ದ ಲಾರಿ ಈ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/12/2024 10:52 pm

Cinque Terre

22.76 K

Cinque Terre

4

ಸಂಬಂಧಿತ ಸುದ್ದಿ