ಹಾವೇರಿ: ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕು ಕರ್ಜಗಿ ಗ್ರಾಮದಲ್ಲಿ ನಡೆದಿದೆ. ವರದಾ ನದಿಯಲ್ಲಿ ಈಜಲು ಹೋಗಿದ್ದ 18 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ.
ನದಿಯಲ್ಲಿ ಈಜಲು ಹೋಗಿದ್ದ ವೇಳೆ ಮುಳ್ಳುಕಂಟಿಯಲ್ಲಿ ಸಿಲುಕಿ ಕಾರ್ತಿಕ್ ಸಾವನ್ನಪ್ಪಿದ್ದಾನೆ.
ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಈಜುಪಟು ಸಿದ್ದು ಚರಂತಿಮಠ ಕಾರ್ಯಾಚರಣೆ ನಡೆಸಿ ಯುವಕನ ಶವ ಮೇಲಕ್ಕೆತ್ತಿದ್ದಾರೆ.
ಸತತ 12 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಮೃತದೇಹ ಪತ್ತೆಯಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವಘಡ ನಡೆದಿದೆ.
PublicNext
13/12/2024 10:05 am