ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ.
ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ (4,18,49,016 ರೂಪಾಯಿಗೆ) ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್ಎನ್ ಕಿರಣಶಂಕರ್ ‘‘ಮನೆ ಮಾರಾಟಕ್ಕಿದೆ’’ ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.
ನಿಜಲಿಂಗಪ್ಪ ನಿವಾಸ ಚಿತ್ರದುರ್ಗ ನಗರದ ವಾರ್ಡ್ ನಂ. 32 ವಿಪಿ ಬಡಾವಣೆಯ ಡಿಸಿ ಬಂಗಲೆಯ ಹತ್ತಿರ ಇದೆ. 117 X 130 ಅಡಿ ವಿಸ್ತೀರ್ಣದ ಶ್ವೇತ ವರ್ಣದ ಈ ಮನೆಯನ್ನು ಖರೀದಿಸಿ ವಸ್ತು ಸಂಗ್ರಹಾಲಯ ಹಾಗೂ ಸ್ಮಾರಕ ಮಾಡಲು ಸರ್ಕಾರ ತೀರ್ಮಾನಿಸಿತ್ತು.
PublicNext
13/12/2024 12:14 pm