ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಾಳು ತಾಯಿ ಮೃತ್ಯು, ಮೂವರು ಪುತ್ರಿಯರಿಗೆ ಚಿಕಿತ್ಸೆ ಮುಂದುವರಿಕೆ

ಉಳ್ಳಾಲ: ಇಲ್ಲಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ-ಮಕ್ಕಳಲ್ಲಿ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಮೃತಪಟ್ಟವರು. ಖುಬ್ರಾ ಹಾಗೂ ಅವರ ಮೂವರು ಪುತ್ರಿಯರು ಒಂದೇ ಕೊಠಡಿಯಲ್ಲಿ ಶನಿವಾರ ರಾತ್ರಿ ಮಲಗಿದ್ದರು. ತಡರಾತ್ರಿ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿತ್ತು. ಪರಿಣಾಮ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಮೃತದೇಹದ ಅಂತ್ಯಸಂಸ್ಕಾರ ಕಲ್ಕಟ್ಟ ಖಂಡಿಕ ಮನೆಯಲ್ಲಿ ಶುಕ್ರವಾರ ನಡೆಯಲಿದೆ. ಮೃತ ಖುಬ್ರಾ ಅವರ ಮೂವರು ಪುತ್ರಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Edited By : Vijay Kumar
Kshetra Samachara

Kshetra Samachara

13/12/2024 12:56 pm

Cinque Terre

4.14 K

Cinque Terre

0

ಸಂಬಂಧಿತ ಸುದ್ದಿ