ಪುಷ್ಪ 2 ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಬಿಗ್ ಶಾಕ್ ಸಿಕ್ಕಿದೆ. ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಘಟನೆಯಿಂದಾಗಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 105, 118(1)r/w3(5) BNS ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ತಿಂಗಳ 4ರಂದು ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಹೋಗಿದ್ದರು. ಆ ಕ್ಷಣದಲ್ಲಿ ಅಭಿಮಾನಿಗಳು ಮುಗಿಬಿದ್ದರು. ಅಲ್ಲಿ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಗುರುವಾರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಂಧ್ಯಾ ಥಿಯೇಟರ್ ಘಟನೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅಲ್ಲು ಅರ್ಜುನ್ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ನಡುವೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
PublicNext
13/12/2024 01:19 pm