ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಹಿಂದುಳಿದ ನಿಗಮಗಳಿಗೆ ಅನುದಾನ ನೀಡಿ - ಒಬಿಸಿ ಜಿಲ್ಲಾಧ್ಯಕ್ಷ ಜಯಣ್ಣ

ಹಾಸನ : ಹಿಂದುಳಿದ ವರ್ಗಗಳ ನಿಗಮಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಒಬಿಸಿ ಜಿಲ್ಲಾಧ್ಯಕ್ಷ ಜಯಣ್ಣ ಮಾತನಾಡಿ, ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಸಮುದಾಯಗಳನ್ನು ನಿರ್ಲಕ್ಷ ಮಾಡುತ್ತಿದೆ. ಹಿಂದುಳಿದ ವರ್ಗಗಳ ಸಮುದಾಯಗಳ ಹಲವು ನಿಗಮಗಳಿಗೆ ಈವರೆಗೂ ಅನುದಾನ ಬಿಡುಗಡೆ ಮಾಡದೆ ಸಮುದಾಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ ಎಂದು ಆರೋಪಿಸಿದರು.

ನಿಗಮಗಳಿಗೆ ಅನುದಾನ ನೀಡದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹಿನ್ನಡೆಯಾಗುತ್ತಿದೆ ಬಿಜೆಪಿ ಸರ್ಕಾರ ಈ ಹಿಂದೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ನೀಡಿದ್ದು ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನ ನೀಡಿಲ್ಲ ಎಂದು ದೂರಿದರು.

Edited By : PublicNext Desk
PublicNext

PublicNext

13/12/2024 02:18 pm

Cinque Terre

16.85 K

Cinque Terre

0

ಸಂಬಂಧಿತ ಸುದ್ದಿ