ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಅಪರಾಧ ತಡೆ ಮಾಸಾಚರಣೆ

ಚಿತ್ರದುರ್ಗ : ಅಪರಾಧ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಟ್ಯಾಬ್ಲೊಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಅಪರಾಧಗಳ ಸಂಖ್ಯೆ ಇಳಿಕೆಗೆ ಪೊಲೀಸ್ ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ. ಇದರ ಜೊತೆಗೆ ಅಪರಾಧ ತಡೆಗೆ ಸಾರ್ವಜನಿಕರಲ್ಲಿಯೂ ಅರಿವು ಹಾಗೂ ಸಹಕಾರ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಲು ಸಾಧ್ಯವಾಗುತ್ತದೆ. ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ 1930 ಗೆ ಸಂಪರ್ಕಿಸಬಹುದು ಎಂದರು.

Edited By : PublicNext Desk
Kshetra Samachara

Kshetra Samachara

13/12/2024 03:06 pm

Cinque Terre

600

Cinque Terre

0

ಸಂಬಂಧಿತ ಸುದ್ದಿ