ಸಾಗರ : ನಗರ ಮತ್ತು ಗ್ರಾಮೀಣ ಭಾಗದಲ್ಲಿ ನಿಗಧಿತ ಬೆಲೆಗಿಂತ ಹೆಚ್ಚು ಬೆಲೆಗೆ ಮಾರಾಟ ಹಾಗೂ ಅಕ್ರಮ ಮಧ್ಯ ಮಾರಾಟ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸ್ಥಳೀಯ ಶಾಖೆ ವತಿಯಿಂದ ಅಬಕಾರಿ ಇಲಾಖೆಯ ಡಿವೈಎಸ್ಪಿ ರವರಿಗೆ ಮನವಿ ಸಲ್ಲಿಸಲಾಯಿತು.
ತಾಲ್ಲೂಕಿನ ಹಳ್ಳಿಗಳಲ್ಲಿ ಅಕ್ರಮ ಮದ್ಯಮಾರಾಟ ಹೆಚ್ಚುತ್ತಿದೆ. ಅಧಿಕೃತ ಮದ್ಯದಂಗಡಿಗಳಿಗಿಂತ ಹಳ್ಳಿಗಳ ಕಿರಾಣಿ ಅಂಗಡಿ, ಗೂಡಂಗಡಿ, ಮಿಲ್ಟ್ರಿ ಹೋಟೆಲ್ ಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಬ್ಕಾರಿ ಇಲಾಖೆ ತಕ್ಷಣ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
PublicNext
13/12/2024 03:11 pm