ಹಾಸನ : ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ನಗರದ ಹೇಮಾವತಿ ಪ್ರತಿಮೆ ಬಳಿ ಜಯ ಕರ್ನಾಟಕ ಸಂಘಟನೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ
ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಿಂದ ಆರಂಭವಾದ ಹೋರಾಟ ಹಾಸನ ನಗರ ತಲುಪಿ ಮೂರು ದಿನಗಳಾಗಿವೆ. ಕಳೆದ ಮೂರು ದಿನಗಳಿಂದ ಸ್ಥಳದಲ್ಲೇ ನಿರಂತರ ಪ್ರತಿಭಟನೆ ನಡೆದರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಯಾವುದೇ ಅಧಿಕಾರಿಗಳು ಬಂದು ಮನವಿ ಸ್ವೀಕರಿಸಿಲ್ಲ ಎಂದು ಹೋರಾಟಗಾರರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವೇಳೆ ರೈತ ಮಹಿಳೆ ಸರೋಜಾ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಉಪಟಾಳ ಮಿತಿ ಮೀರಿದೆ ನಾವು ಮಕ್ಕಳನ್ನು ಶಾಲೆಗೆ ಕಳುಹಿಸಲು ಯೋಚನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಜೊತೆಗೆ ನಾವು ಕೂಡ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೇವೆ ಆದರೆ ಅದಕ್ಕೂ ಕಾಡಾನೆಗಳ ಹಾವಳಿಯಿಂದ ಅವಕಾಶವಾಗುತ್ತಿಲ್ಲ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರ ಕೂಡಲೇ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಇಲ್ಲವಾದರೆ ನಮಗೆ ವಿಷ ನೀಡಲಿ ಎಂದರು.
PublicNext
13/12/2024 03:30 pm