ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗುಣಾತ್ಮಕ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ

ನವಲಗುಂದ : ಪ್ರತಿಯೊಬ್ಬರಲ್ಲಿಯೂ ಒಂದು ವಿಶಿಷ್ಟವಾದ ವ್ಯಕ್ತಿತ್ವವಿರುತ್ತದೆ. ದೈಹಿಕ, ಬೌದ್ಧಿಕ, ಸಾಮಾಜಿಕ, ಆಧ್ಯಾತ್ಮಿಕ ಆಯಾಮಗಳ ರೂಪದಲ್ಲಿ ವ್ಯಕ್ತವಾಗುತ್ತದೆ. ಗುಣಾತ್ಮಕ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಡೋಣೂರಮಠ ತಿಳಿಸಿದರು.

ಪಟ್ಟಣದ ಶ್ರೀ ಶಂಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡಲಾದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸಮಾಜದಲ್ಲಿ ಅನೇಕ ಹಿರಿಯ ಸಾಧಕ ಸಂಪನ್ಮೂಲ ವ್ಯಕ್ತಿಗಳನ್ನೇ ಆದರ್ಶವನ್ನಾಗಿ ಇಟ್ಟುಕೊಂಡರೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗುವರು. ಈ ಹಿನ್ನೆಲೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳು ಮಕ್ಕಳ ವೈಯಕ್ತಿಕ ಬದುಕಿಗೆ ಬೆಳಕಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಅಥಿತಿಗಳಾದ ಅಶೋಕ ಮಜ್ಜಿಗುಡ್ಡ, ಶ್ರೀಧರ ಹೆಬಸೂರ, ಪ್ರಾಚಾರ್ಯರಾದ ಜಯರಾಮ ಲಮಾಣಿ, ಭೀಮರಾಶಿ ಹೂಗಾರ, ಎಂ.ಆರ್.ಪಡೇಸೂರ, ಎಂ.ಎಸ್.ಕಂಬಾಳಿಮಠ, ಬಿ.ಎಚ್.ಕೆಳಗಡೆ, ಪಿ.ಆಯ್.ಬನ್ನಿಗಿಡದ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

13/12/2024 03:52 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ