ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಹೈಕೋರ್ಟ್‌ನಲ್ಲಿ ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆ ನಡೆಸಿದೆ. ದರ್ಶನ್ ಪರ ವಕೀಲರು ರೆಗ್ಯುಲರ್ ಬೇಲ್ಗಾಗಿ ಕಸರತ್ತು ನಡೆಸಿದ್ದರು..
ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಇಂದು ಪ್ರಕಟಿಸಿದೆ. ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಪರ ಸಿವಿ ನಾಗೇಶ್, ಪವಿತ್ರಾ ಗೌಡ ಪರ ಹಿರಿಯ ವಕೀಲ ರೆನಿ ಸೆಬಾಸ್ಟಿಯನ್, ದರ್ಶನ್ ಕಾರು ಚಾಲಕ ಎಂ ಲಕ್ಷ್ಮಣ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ಪ್ರದೋಶ್ ಪರವಾಗಿ ವಕೀಲ ಕೆ ದಿವಾಕರ್ ವಕಾಲತ್ತು ವಹಿಸಿದ್ದರು. ಪೊಲೀಸ್ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ವಾದ ಮಂಡಿಸಿದರು.
ಮುಂದುವರೆದು ಎಲ್ಲಾ ಆರೋಪಿಗಳ ಅಥವಾ ಎ 1, ಎ 2 ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಸಾಮಾನ್ಯ ಜಾಮೀನನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
PublicNext
13/12/2024 03:55 pm