ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಈ ನಡುವೆ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಪ್ರತಿಕ್ರಿಯೆ ನೀಡಿದ್ದಾರೆ.
ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಪ್ರಾರಂಭದಲ್ಲಿ ಈಗ ಜಾಮೀನು ನೀಡಿದ್ದರೂ ಬಳಿಕ ತೀರ್ಪಿನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ನಮಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ, ಅದರ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ.
ಮುಂದೆ ದರ್ಶನ್ ನಿಮ್ಮ ಮನೆಗೆ ಬಂದ್ರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ವಿಚಾರ ನಮ್ಮಲ್ಲಿ ಚರ್ಚೆ ಇಲ್ಲ, ನಮ್ಮ ಮಗನನ್ನ ಕಳೆದುಕೊಂಡಿದ್ದೇವೆ, ದರ್ಶನ್ ಬರುವುದು ಬೇಕಿಲ್ಲ, ನನ್ನ ಮಗನ ಸಾವಿಗೆ ನ್ಯಾಯ ಬೇಕಿದೆ ಎಂದು ರೇಣುಕಾಸ್ವಾಮಿ ತಂದೆ ಶಿವನಗೌಡ್ರು ಹೇಳಿದ್ದಾರೆ.
PublicNext
13/12/2024 04:15 pm