ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದ ಭದ್ರಾವತಿಯಲ್ಲಿ ಬೈಕ್ ಕಳ್ಳನ ಬಂಧನ

ಶಿವಮೊಗ್ಗ : ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಭದ್ರಾವತಿಯ ಯುವಕನೊಬ್ಬನಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಶಿವಮೊಗ್ಗದ ಭದ್ರಾವತಿ ಹೆಬ್ಬಂಡಿ ತಾಂಡದ ಬೈಕ್ ಕಳ್ಳ ರಂಗನಾಥ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈತನಿಂದ 2 ದ್ವಿಚಕ್ರ ವಾಹನಗಳ ವಶಪಡಿಸಿಕೊಳ್ಳಲಾಗಿದೆ. ಸುಮಾರು 1,10,000 ರೂ.ಗಳ 2 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.

ಇನ್ನು ಜು. 16 ರಂದು, ತರಿಕೆರೆಯ ಬನವನಗರದ ನವೀನ್ ಎಂಬುವವರ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿತ್ತು‌. ಭದ್ರಾವತಿ ಬೈಪಾಸ್ ರಸ್ತೆಯಲ್ಲಿರುವ ಇಂಜಿನಿಯರಿಂಗ್ ವರ್ಕ್ಸ್ ಮುಂದೆ ನವೀನ್ ಎಂಬುವವರು, ತಮ್ಮ ವಾಹನ ನಿಲ್ಲಿಸಿದ್ದರು. ಈ ವಾಹನ‌ ಕಳ್ಳತನದ ಬಗ್ಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ನೀಡಿದ್ದರು. ಈ ಪ್ರಕರಣ ಬೇಧಿಸುವ ವೇಳೆ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಂತಾಗಿದೆ

Edited By : Abhishek Kamoji
Kshetra Samachara

Kshetra Samachara

13/12/2024 04:27 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ