ಗದಗ : ರೋಣ ಪಟ್ಟಣಕ್ಕೆ ಡಿ.15 ರಂದು ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು . ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು .
ರೋಣ ವಿಧಾನ ಸಭಾ ಮತಕ್ಷೇತ್ರದಲ್ಲಿ 200 ಕೋಟಿ ರೂ.ವೆಚ್ಚದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಸ್.ನೇಮಗೌಡ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮಕ್ಕೆ 40 ಸಾವಿರ ಜನ ಸೇರುವ ನಿರೀಕ್ಷೆ ಇಟ್ಟುಕೊಂಡಿರುವ ಹಿನ್ನೆಲೆ ಈಗಾಗಲೇ 30 ಸಾವಿರ ಆಸನದ ಬೃಹತ್ ಪೆಂಡಾಲ್ ನ್ನು ಹಾಕಲಾಗುತ್ತಿದೆ. ಇನ್ನು ಮಹಿಳೆಯರಿಗೆ 12 ಮತ್ತು ಪುರುಷರಿಗೆ 18 ಊಟದ ಕೌಂಟರ್ ನಿರ್ಮಿಸಲು ನಿರ್ಧರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಆಹಾರ, ಭದ್ರತೆ, ವಿದ್ಯುತ್, ವೇದಿಕೆಗಳಿಗೆ ಹೆಚ್ಚು ಗಮನ ಹರಿಸಬೇಕು, ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾವಹಿಸಬೇಕು, ಪೊಲೀಸ್ ಸಿಬ್ಬಂದಿ ಟ್ರಾಫಿಕ್ ಬಗ್ಗೆ ಮುತುವರ್ಜಿ ವಹಿಸಿ ವಿಐಪಿಗಳಿಗೆ ಯಾವುದೇ ತೊಂದರೆಯಾಗದಂತೆ ಶಿಸ್ತುಬದ್ದತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
PublicNext
13/12/2024 05:02 pm