ಹಾವೇರಿ : ಹಿಂದುಳಿದ ವರ್ಗಗಳ ನಿಗಮಗಳಿಗೆ ರಾಜ್ಯ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಳಿದ ವರ್ಗಗಳ ಕಲ್ಯಾಣಕ್ಕಾಗಿ ಮಾಡಿರುವ ನಿಗಮಗಳಿಗೆ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ನೀಡಿಲ್ಲಾ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿ ವಿರೋಧಿ ಸರ್ಕಾರ ಎಂದು ಕಾರ್ಯಕರ್ತರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ಬಿತ್ತಿಪತ್ರಗಳ ಪ್ರದರ್ಶನ ಮಾಡಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಅನುಷ್ಠಾನಕ್ಕೆ ಎಲ್ಲ ಹಣ ಬಳಿಸಿಕೊಳ್ಳುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು .
PublicNext
13/12/2024 05:24 pm