ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ನಾವು ಅಂಗವಿಕಲರಲ್ಲ, ಲಕ್ಷ್ಮೀ ಹೆಬ್ಬಾಳ್ಕರ್ ನಿಜವಾದ ಅಂಗವಿಕಲೆ - ವಿಶೇಷ ಚೇತನರ ಆಕ್ರೋಶ

ಬೆಳಗಾವಿ: ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಹಿತ ಕಾಪಾಡಲು ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಸೇವೆ ಖಾಯಂಗೊಳಿಸಬೇಕೆಂದು ಆಗ್ರಹಿಸಿದರು. ಇಂದು ಸುವರ್ಣ ಗಾರ್ಡನ್ ನಲ್ಲಿ ಹೋರಾಟ ನಡೆಸಿದ ನವಕರ್ನಾಟಕ ವಿಕಲಚೇತನರ ಗೌರವಧನ ಸಂಘದ ಕಾರ್ಯಕರ್ತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನದಲ್ಲಿ ಸುಮಾರು 6860 ತಾಲೂಕು ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರಂಭಿಕ ದಿನಗಳಲ್ಲಿ ರೂ.750/-ರಿಂದ ಆರಂಭಗೊಂಡ ಗೌರವಧನ ಪುನರ್ವಸತಿ ನಿರಂತರ ಹೋರಾಟಗಳ ಫಲದಿಂದಾಗಿ 2007 ರಲ್ಲಿ ರೂ.3000/-. ಬಳಿಕ ರೂ.6000/- ಹಾಗೂ ಪ್ರಸ್ತುತ ರೂ.9000/-ಕ್ಕೆ ಬಂದು ತಲುಪಿದೆ. ಇಷ್ಟೊಂದು ಕಡಿಮೆ ಗೌರವಧನ ಪಡೆಯುತ್ತಿದ್ದಾಗ್ಯೂ ಈ ಕಾರ್ಯಕರ್ತರು ಕಳೆದ 15 ವರ್ಷಗಳಿಂದ ಅತ್ಯಂತ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡರು.

ಪ್ರಮುಖವಾಗಿ ಅಂಗವಿಕಲರ ಹೆಸರಿನಲ್ಲಿ ಹಣ ನೀಡಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸುವ ಕೆಲಸ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದೆ‌‌. ಈ ರೀತಿಯ ನಕಲಿ ವೈದ್ಯಕೀಯ ಪ್ರಮಾಣ ಪತ್ರ ಪಡೆದು ಉಚಿತ ಬಸ್ ಪಾಸ್, ಪಿಂಚಣಿ, ಸರ್ಕಾರಿ ನೌಕರಿ ಹೀಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಕೆಲಸಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಸರ್ಕಾರದ ಸೇವೆ ಸಲ್ಲಿಸಲು ಕಾರ್ಯಕರ್ತರು ಕೂಡ ವಿಕಲಚೇತನರೇ ಆಗಿದ್ದು, ಅತ್ಯಂತ ಕ್ಲಿಷ್ಟ ಪರಿಸ್ಥಿತಿಯಲ್ಲಿ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಕಾರ್ಯನಿರ್ವಹಿಸುತ್ತಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಹಿತ ಕಾಯುವುದರಲ್ಲಿ ಮುಂಚೂಣಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

ಅದಕ್ಕಾಗಿ ವಿಕಲಚೇತನ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರವು ಖಾಯಂಗೊಳಿಸುವ ಅಥವಾ ಈ ಕಾರ್ಯಕರ್ತರಿಗೆ ವೇತನ ಪದ್ಧತಿ ಜಾರಿಗೆ ತರುವ ಮೂಲಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಏಳನೇಯ ವೇತನ ಆಯೋಗದಲ್ಲಿ ರಾಜ್ಯ ಸರಕಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಮಾಡಲಾಗಿದೆ. ಇದರ ಜೊತೆಗೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯಗಳ ಮೇಲ್ವಿಚಾರಕರ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯಲ್ಲಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : Manjunath H D
PublicNext

PublicNext

13/12/2024 05:39 pm

Cinque Terre

9.5 K

Cinque Terre

0

ಸಂಬಂಧಿತ ಸುದ್ದಿ