ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಂಡವರಿಂದಲೇ ಅನ್ಯಾಯ - ಶೇಜವಾಡಕರ್ ಕಿಡಿ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಬಿಟ್ಟಿ ಭಾಗ್ಯಗಳಿಂದ ಹಿಂದುಳಿದ ವರ್ಗಗಳಿಗೆ ಹಾಗೂ ನಿಗಮ ಮಂಡಳಿಗೆ ಯಾವುದೇ ಅನುದಾನ ಇಲ್ಲವಾಗಿದೆ. ಅಲ್ಲದೇ ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸತೀಶ್ ಶೇಜವಾಡಕರ್ ವಾಗ್ದಾಳಿ ನಡೆಸಿದರು.

ಪ್ರತಿಭಟನೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅನುದಾನ ಇಲ್ಲದೇ ಇರುವುದರಿಂದ ಪರಿಸ್ಥಿತಿ ನಿಜಕ್ಕೂ ಹೀನಾಯ ಸ್ಥಿತಿಗೆ ತಲುಪಿದೆ‌. ಅಲ್ಲದೇ ಹಿಂದುಳಿದ ನಾಯಕರು ಎಂದು ಅಧಿಕಾರ ಹಿಡಿದಿರುವ ಕಾಂಗ್ರೆಸ್ಸಿನಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ನಿಗಮ ಮಂಡಳಿಗೆ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

Edited By : Manjunath H D
Kshetra Samachara

Kshetra Samachara

13/12/2024 05:46 pm

Cinque Terre

4.78 K

Cinque Terre

0

ಸಂಬಂಧಿತ ಸುದ್ದಿ