ಬೆಳಗಾವಿ: ಬಾಣಂತಿ ಹಾಗೂ ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ (ಬಿಮ್ಸ್) ಭೇಟಿ ನೀಡಿದ ಸಚಿವರು, ಈ ವೇಳೆ ವಿವಿಧ ಘಟಕಗಳಿಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ನೂತನ ಕಟ್ಟಡಕ್ಕೂ ಸಚಿವರು ಭೇಟಿ ನೀಡಿದರು.
ನಂತರ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು. ಬಾಣಂತಿಯರು ಹಾಗೂ ಹಸುಗೂಸುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ರಾಜು ಸೇಠ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸೀನ್, ಬಿಮ್ಸ್ ನಿರ್ದೇಶಕರಾದ ಅಶೋಕ್ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ್, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲಳ್ಳಿ, ಜಿಲ್ಲಾ ಸರ್ಜನ್ ಡಾ.ವಿಠಲ್ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಗಡಿ, ಡಾ.ಉಮೇಶ್ ಕುಲಕರ್ಣಿ ಉಪಸ್ಥಿತರಿದ್ದರು.
PublicNext
13/12/2024 05:57 pm