ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಚಿಕ್ಕಡಪಲ್ಲಿ ಪೊಲೀಸರು ಇಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.
PublicNext
13/12/2024 06:00 pm