ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಆತ್ಮಹತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ಥರಿಗೆ ಆಸ್ಪತ್ರೆಯಲ್ಲಿ ಭೇಟಿಯಾದ ಜಿಲ್ಲಾ ಬಿಜೆಪಿ ನಿಯೋಗ

ಬೀದರ್: ಕಾರಂಜಾ ನೀರಾವರಿ ಯೋಜನೆ ಮುಳುಗಡೆ ಸಂತ್ರಸ್ಥರಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಸಿಗದ ಕಾರಣ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ಥರ ಹಿತಾರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ, ರಾಜಪ್ಪ ಕಮಲಪುರ, ರಾಜಶೇಖರ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತನಾಯಕರೊಂದಿಗೆ ಬಿಜೆಪಿ ಜಿಲ್ಲಾ ನಿಯೋಗವು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಯೋಗದಿಂದ ತುರ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತರ ಪರವಾರದೊಂದಿಗೆ ಆಸ್ಪತ್ರೆಯಲ್ಲಿ ಅವರ ಆರೋಗ್ಯದ ಸುಧಾರಣೆಯ ಬಗ್ಗೆ ಚರ್ಚಿಸಿದರು. ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷರಾದ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬಿದರ ನಗರ ಘಟಕದ ಅಧ್ಯಕ್ಷ ಹಾಗೂ ನಗರ ಸಭೆ ಸದಸ್ಯರಾದ ಶೆಶಿ ಹೊಸಳ್ಳಿ,ಮಾಜಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಭಾಜಪಾ ಧೋರಣರಾದ ಗುರುನಾಥ ಜ್ಯಾಂತಿಕಾರ ಅವರುಗಳು ಉಪಸ್ಥಿತರಿದ್ದರು.

Edited By : Abhishek Kamoji
PublicNext

PublicNext

13/12/2024 07:56 pm

Cinque Terre

19.43 K

Cinque Terre

0