ಬೀದರ್ : ಇಲ್ಲಿನ ಜನವಾಡಾ ಠಾಣೆಯ ವ್ಯಾಪ್ತಿಯ ವಿಳಾಸಪುರ್ ಗ್ರಾಮದಲ್ಲಿ ದುಷ್ಕರ್ಮಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆಕ್ರೋಶ ಭುಗಿಲೆದ್ದಿದೆ.
ನಿನ್ನೆ(ಡಿ.12) ತಡ ರಾತ್ರಿ ದುಷ್ಕರ್ಮಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದು, ಬೆಳಗಿನ ಜಾವ ದಲಿತ ಸಮುದಾಯದ ಮುಖಂಡರು ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ ದುಷ್ಕರ್ಮಿಗಳನ್ನು ಆದಷ್ಟು ಬೇಗ ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಜನವಾಡಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಆಗಮಿಸಿದ್ದಾರೆ.
PublicNext
13/12/2024 08:06 pm