ಉಡುಪಿ : ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ “ಕ್ರಿಸ್ಮಸ್ ಕ್ರಿಸ್ತೋತ್ಸವ -2024” ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಡಿಸೆಂಬರ್ 14ರ ಶನಿವಾರ ಸಂಜೆ 6ಗಂಟೆಗೆ ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಆಯೋಜನಾ ಸಮಿತಿಯ ಸಂಚಾಲಕ ಡಾ. ಸುಶೀಲ್ ಜತ್ತನ್ನ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕ್ರಿಸ್ತೋತ್ಸವ ಕಾರ್ಯಕ್ರಮವು ನೆರೆದ ಸಭಿಕರಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಬ್ಬದ ಊಟವನ್ನು ಉಣ ಬಡಿಸಲಿದೆ ಎಂದರು.
ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಮಾತನಾಡಿ, ಸಂಜೆ 6ಗಂಟೆಯಿಂದ ಸ್ಥಳೀಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಪರಿಸರ, ಶಾಂತಿ ಮತ್ತು ಸಾಮರಸ್ಯದ ಸಂದೇಶವನ್ನು ನೀಡುವ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ. ಸಂಜೆ 7ಗಂಟೆಗೆ ಕೊರಿಯನ್ ತಂಡದಿಂದ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ. 60 ಕಲಾವಿದರ ಈ ತಂಡವು ಕೆಲವು ಕೊರಿಯನ್ ಕಲಾವಿದರನ್ನು ಒಳಗೊಂಡಿದೆ. ಕನ್ನಡ ಭಾಷೆಯ ದ್ವನಿ ಮುದ್ರಿತ ಹಾಡುಗಳು ಮತ್ತು ಸಂಗೀತದಿಂದ ಸಮೃದ್ಧವಾದ ಈ ಪ್ರದರ್ಶನವು 60 ನಿಮಿಷಗಳ ಸಂಗೀತ ನಾಟಕವನ್ನು ಒಳಗೊಂಡಿದೆ. ಈ ಕಾರ್ಯಕ್ರಮ ಧ್ವನಿ ಮತ್ತು ಬೆಳಕಿನ ಜೊತೆಯಾಟದೊಂದಿಗೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದ್ದರು.
Kshetra Samachara
13/12/2024 08:25 pm