ಮಂಗಳೂರು: ರಾಷ್ಟ್ರಮಟ್ಟದಲ್ಲಿ ಕೊಡಮಾಡುವ ಮೇಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ 3 ಅಭ್ಯರ್ಥಿಗಳು ಭಾಜರಾಗಿದ್ದಾರೆ.
2023ನೇ ವರ್ಷದ ಮೇಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್ ಪ್ರಕಟಗೊಂಡಿದ್ದು, ಕರ್ನಾಟಕದ 8 ಮಂದಿಗೆ ಈ ಪ್ರಶಸ್ತಿ ಲಭ್ಯವಾಗಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಅಭ್ಯರ್ಥಿಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಯಸ್ಕರ ವಿಭಾಗದಲ್ಲಿ: ದ.ಕ.ಜಿಲ್ಲಾ ಕೋಶಾಧಿಕಾರಿ ಹಾಗೂ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಕಾರ್ಯದರ್ಶಿಯಾಗಿ ದುಡಿದ ನವೀನ್‌ಚಂದ್ರ ಅಂಬೂರಿ ಹಾಗೂ ಭಾರತ್ ಸೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಯುವ ವಿಭಾಗದಲ್ಲಿ ರೋವರ್ ಸೈಟ್ಸ್ ಲೀಡರ್ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಚಂದ್ರಾಕ್ಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Kshetra Samachara
13/12/2024 08:27 pm