ಮಂಗಳೂರು: ಮನಪಾ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 2 -80MLD ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ಬರುವ ರೇಜಕ ಸ್ಥಾವರದಲ್ಲಿ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ನೀರು ಸರಬರಾಜು ವ್ಯತ್ಯಯವಾಗಲಿದೆ.
ಕಾಮಗಾರಿ ಹಿನ್ನೆಲೆಯಲ್ಲಿ ಡಿಸೆಂಬರ್ 16ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್‌ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್‌ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ನಗರ, ಚಿಲಿಂಬಿ, ಕೋಡಿಕಲ್, ಉರ್ವಾಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು ಹಾಗೂ ಮರಕಡ ಭಾಗಶಃ ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ಸರಬರಾಜು ನಿಲುಗಡೆಯಾಗಲಿದೆ. ನೀರು ಸರಬರಾಜಿನಲ್ಲಿ ವ್ಯತ್ಯಯ ಆಗುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆಯೊಂದಿಗೆ ಸಹಕರಿಸಬೇಕೆಂದು ವಿನಂತಿಸಲಾಗಿದೆ.
Kshetra Samachara
13/12/2024 08:40 pm