ಮುಲ್ಕಿ : ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ದೂರವಿದ್ದು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿನ ಏಳಿಗ್ಗೆ ಶ್ರಮಿಸಬೇಕು ಎಂದು ಮುಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಸುದೇವ ಬೆಳ್ಳೆ ಹೇಳಿದರು.
ವಿಜಯ ಕಾಲೇಜಿನಲ್ಲಿ ಸಭಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ,ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಜಯಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಸ್ಯಾಮ್ ಮ್ಯಾಬೆನ್ , ರಾಮ್ ದಾಸ್ ಕಾಮತ್,ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಮೀದಾ ಬೇಗಂ,ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವೆಂಕಟೇಶ್ ಭಟ್,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಬಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/12/2024 08:46 pm