ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಶೇಂಗಾ ಬಿಡಿಸುವ ಯಂತ್ರ - ಎಕ್ಸೆಲ್ ನಡುವೆ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಚಳ್ಳಕೆರೆ : ಶೇಂಗಾ ಬಿಡಿಸುವ ಯಂತ್ರದ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಸಂಜೆ 6.30 ಸಮಯದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರ ಗ್ರಾಮದ ಮಧ್ಯದಲ್ಲಿ ಈ ಘಟನೆ ನಡೆದಿದೆ.

ಕೆ.ಟಿ ಹಳ್ಳಿ ಗ್ರಾಮದ ಸೋಮನಾಥ ನಾರಾಯಣಪುರದಿಂದ ಬೆಳಗೆರೆ ಗ್ರಾಮಕ್ಕೆ ಬರುತ್ತಿರುವಾಗ ಶೇಂಗಾ ಬಿಡಿಸುವ ಯಂತ್ರದ ವಾಹನದ ಚಾಲಕ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ವಿಷಯ ತಿಳಿದು ಬೆಳಗೆರೆ ಗ್ರಾಮದ ಯುವಕರು ವಾಹನವನ್ನು ಹಿಂಬಾಲಿಸಿ ಹೋಗಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ಆರ್ ಎಫ್ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Abhishek Kamoji
Kshetra Samachara

Kshetra Samachara

13/12/2024 09:15 pm

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ