ಹೊಸದುರ್ಗ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಚ್ ಮಾಡಿರುವುದನ್ನು ಖಂಡಿಸಿ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘದ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು'ಶಾಂತಿಯುತವಾಗಿ ನಡೆಯುತ್ತಿದ್ದ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಸರ್ಕಾರ ಪೋಲೀಸರ ಮೂಲಕ ಲಾಠಿ ಚಾರ್ಜ್ ಮಾಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೀಸಲಾತಿ ಕೇಳುವ ಹಕ್ಕು ಇದೆ. ಸರ್ಕಾರ ಇದನ್ನು ಹತ್ತಿಕ್ಕುವ ಭರದಲ್ಲಿ ಏಕಾಏಕಿ ಲಾಠಿ ಬೀಸಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಇದರ ಪರಿಣಾಮವನ್ನು ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ಸಮಾಜದ ಮೇಲೆ ಆಗಿರುವ ಹಲ್ಲೆಯನ್ನು ಖಂಡಿಸಿ ಎಲ್ಲ ವೀರಶೈವ ಲಿಂಗಾಯಿತ ಸಮಾಜದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟಕ್ಕೆ ಇಳಿಯಬೇಕು' ಎಂದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಧನು ಶಂಕರ್ ಒತ್ತಾಯಿಸಿದರು...
Kshetra Samachara
14/12/2024 07:05 am