ಮೈಸೂರು : ನಟ ದರ್ಶನ್ ಸೇರಿದಂತೆ 7 ಮಂದಿ ಸಹಚರರಿಗೂ ಜಾಮೀನು ಮಂಜೂರು ವಿಚಾರವಾಗಿ ಪ್ರತಿಕ್ರಿಯಿಸಲು ನಟ ಪ್ರಕಾಶ್ ರಾಜ್ ನಕಾರ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ನಿರ್ದಿಂಗತ ಮಕ್ಕಳ ನಾಟಕೋತ್ಸವ ಕುರಿತು ಸುದ್ದಿಗೋಷ್ಠಿ ನಡೆಸಿದ ಪ್ರಕಾಶ್ ರಾಜ್, ನಾನು ಕೇವಲ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ಕಳ್ನನನ್ನ್ ಮಕ್ಕಳ ಬಗ್ಗೆ ಮಾತನಾಡಲು ಬಂದಿಲ್ಲ ಎಂದಿದ್ದಾರೆ.
ಅಲ್ಲದೆ ರಾಜಕೀಯ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಪ್ರಶ್ನೆ ಕೇಳದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಇದೇ ವೇಳೆ ಮನವಿ ಮಾಡಿದ್ದಾರೆ. ಬೇರೆ ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಾತನಾಡುತ್ತೇನೆ. ಆದರೆ ಕಳ್ ನನ್ನ್ ಮಕ್ಕಳು ಎಂದು ಪ್ರಕಾಶ್ ರಾಜ್ ಹೇಳಿದ್ದು ಯಾರ ಕುರಿತು? ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
PublicNext
14/12/2024 10:39 am