ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪರಾಧ ತಡೆಗೆ ಅರಿವು ಅಗತ್ಯ: ಡಿಸಿ ವೆಂಕಟೇಶ್

ಚಿತ್ರದುರ್ಗ: ಅಪರಾಧ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಟ್ಯಾಬ್ಲೊಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಅಪರಾಧಗಳ ಸಂಖ್ಯೆ ಇಳಿಕೆಗೆ ಪೊಲೀಸ್ ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ. ಇದರ ಜೊತೆಗೆ ಅಪರಾಧ ತಡೆಗೆ ಸಾರ್ವಜನಿಕರಲ್ಲಿಯೂ ಅರಿವು ಹಾಗೂ ಸಹಕಾರ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಲು ಸಾಧ್ಯವಾಗುತ್ತದೆ. ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ 1930 ಗೆ ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

14/12/2024 11:32 am

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ