ಚಿತ್ರದುರ್ಗ: ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‌ನಲ್ಲಿರುವ ಪವರ್ ಕ್ರೀಯೇಷನ್ ಇಸ್ಪೀಟ್ ಕ್ಲಬ್ ಮೇಲೆ ಬಡಾವಣೆ ಪೊಲೀಸರರು ದಾಳಿ ನಡೆಸಿದ್ದಾರೆ. ದಾಳಿ ವೇಳೆಯಲ್ಲಿ 17 ಮಂದಿಯನ್ನ ವಶಕ್ಕೆ ಪಡೆದಿದ್ದು, 39170 ರೂ. ನಗದು ಹಣ ಜಪ್ತಿ ಮಾಡಲಾಗಿದೆ.
ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‌ನಲ್ಲಿರುವ ಪವರ್ ಕ್ರೀಯೇಷನ್ ಇಸ್ಪೀಟ್ ಕ್ಲಬ್ ಮೇಲೆ ಎರಡನೇ ಬಾರಿಗೆ ಪೊಲೀಸರ ದಾಳಿ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿ ಇಸ್ಪೀಟ್ ಆಡುತ್ತಿದ್ದ ಟೀಂ ಮೇಲೆ ದಾಳಿ ಮಾಡಲಾಗಿದೆ. ಚಿತ್ರದುರ್ಗ ಎಸ್‌ಪಿ ರಂಜಿತ್ ಕುಮಾರ್ ಬಂಡಾರೂ ಮಾರ್ಗದರ್ಶನದಲ್ಲಿ, ಚಿತ್ರದುರ್ಗದ DYSP ದಿನಕರ್, CPI ನಹಿಂ, PSI ರಘುನ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
PublicNext
14/12/2024 12:14 pm