ಧಾರವಾಡ: ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಧಾರವಾಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಬಂದು ನಾಲ್ಕು ತಿಂಗಳು ಕಳೆದರೂ ಒಳ ಮೀಸಲಾತಿ ಜಾರಿ ಮಾಡಿದೇ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಈ ಕುರಿತು ಬೆಳಗಾವಿ ಸುವರ್ಣ ಸೌಧದ ಎದುರು ಡಿ.16 ರಂದು ಬೃಹತ್ ಪ್ರತಿಭಟನಾ ಹಕ್ಕೊತ್ತಾಯ ಸಮಾವೇಶ ನಡೆಸಲಾಗುವುದು ಎಂದರು.
ಆಗಸ್ಟ್ 1 ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕದ ಸರ್ಕಾರ ಅಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ ಎಂದರು.
ಒಳಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ. ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೇ ಇದೆ. ಇದು ಖಂಡನಾರ್ಹ ಎಂದರು.
ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಇದೇ ಡಿ.16 ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ಕೊಡಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/12/2024 01:08 pm