ಚಿಕ್ಕೋಡಿ: ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಮೇಲ್ದರ್ಜೆಗೆ ಏರಿಸಿ 30 ವರ್ಷ ಗತಿಸಿದೆ. ಆದರೆ ಈಗಲೂ ಸಮುದಾಯ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಮನೋಹರ ಹೇಗರೆ ಹೇಳಿದ್ದಾರೆ.
ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸದ್ಯಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸದಲಗಾ ಪಟ್ಟಣದಲ್ಲಿ 30,000ಕ್ಕಿಂತ ಹೆಚ್ಚು ಜನಸಂಖ್ಯೆ ಇದೆ. ಆದರೆ ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸುವ ಹಿತ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 30 ವರ್ಷ ಗತಿಸಿದರೂ ಕೂಡ ಇನ್ನೂ ಸಮುದಾಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.
ಈ ವಿಷಯ ಕುರಿತಂತೆ ಮೆಲಾಧಿಕಾರಿಗೆ ಮಾಹಿತಿ ಕೇಳಿದರು ಕೂಡ ಅಧಿಕಾರಿಗಳು ಸಮರ್ಪಕವಾದ ಮಾಹಿತಿ ನೀಡುತ್ತಿಲ್ಲ.ಸದಲಗಾ ಪಟ್ಟಣಕ್ಕೆ ಸರ್ಕಾರ ಮಂಜೂರು ಮಾಡಿರುವ ಸಮುದಾಯ ಆರೋಗ್ಯ ಕೇಂದ್ರ ಎಲ್ಲಿ ಹೋಯಿತು ಎಂದು ಪರಿಶೀಲನೆ ಆಗಬೇಕು. ತಪ್ಪು ಮಾಡಿದಂತಹ ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನೋಹರ ಹೇಗರೆ ಯವರು ಒತ್ತಾಯಿಸಿದರು.
Kshetra Samachara
14/12/2024 01:14 pm