ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ - ವಕೀಲರ ಸಂಘದಿಂದ ಎಸ್ಪಿಗೆ ಮನವಿ

ಉಡುಪಿ:ವಕೀಲರ ಸಂಘದ ಸದಸ್ಯ, ರಾಜನ್ ಕುಮಾರ್ ಮೇಲೆ ಡಿಸೆಂಬರ್ 11ರಂದು ಹಲ್ಲೆ ನಡೆದಿತ್ತು.ಈ ಹಲ್ಲೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ವಕೀಲರ ಸಂಘದ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್ಪಿ ಡಾ.ಅರುಣ್ ಕುಮಾರ್ , ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭ , ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ,ನ್ಯಾಯವಾದಿಗಳಾದ ವಿಜಯ್ ಕುಮಾರ್ ಶೆಟ್ಟಿ, ಆರೂರು ಸುಖೇಶ್ ಶೆಟ್ಟಿ, ಆನಂದ ಮಡಿವಾಳ,ರಾಜೇಶ್ ,ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್ ,ಗಂಗಾಧರ್ ಎಚ್ .ಎಂ ,ಮುರಳಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

14/12/2024 01:22 pm

Cinque Terre

10.32 K

Cinque Terre

0

ಸಂಬಂಧಿತ ಸುದ್ದಿ