ಮಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ನೀಡದೆ, ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.
ಮಂಗಳೂರು ನಗರದ ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಕಚೇರಿ ಮುಂಭಾಗ ಈ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿದರು.
ಈ ಬಗ್ಗೆ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಹಿಂದುಳಿದ ವರ್ಗಗಳ ನಿಗಮಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡದೆ ರಾಜಕೀಯ ಮಾಡುತ್ತಿದೆ. ಇದರಿಂದ ಹಿಂದುಳಿದ ವರ್ಗದ ಜನರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ತಕ್ಷಣ ಸರ್ಕಾರ ಹಿಂದುಳಿದ ನಿಗಮಗಳಿಗೆ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
Kshetra Samachara
14/12/2024 02:07 pm