ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು: ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ ಗೆ ಮನವಿ ಪತ್ರ

ಮೊಳಕಾಲ್ಮುರು:-ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಮಾದಿಗ ಹಾಗೂ ಮಾದಿಗ ಸಮುದಾಯದ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಂಪುರ ಗ್ರಾಮದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣಗೆ ಮನವಿ ಮಾಡಲಾಯಿತು.

ಬೆಳಗಾವಿ ಅಧಿವೇಶನದಲ್ಲಿ ಒಳ ಮೀಸಲಾತಿ ವಿಷಯ ಪ್ರಸ್ತಾಪಿಸಬೇಕು, ಮಾದಿಗ ಸಮುದಾಯದ ಬಹುದಶಕಗಳ ಬೇಡಿಕೆಗಯಾಗಿದ್ದು ಒಳ ಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿಗೆ ಒತ್ತಾಯ ಮಾಡಬೇಕು ಎಂದು ಸಮುದಾಯದ ಮುಖಂಡರು ಶಾಸಕ ಎನ್ ವೈ ಗೋಪಾಲಕೃಷ್ಣಗೆ ಮನವಿ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಶಾಸ ಎನ್ ವೈ ಗೋಪಾಲಕೃಷ್ಣ ಮಾತನಾಡಿ, ನಾನೇನಾದರೂ ಒಳ ಮೀಸಲಾತಿ ರಚನೆ ಸಮಿತಿ ಅಧ್ಯಕ್ಷನಾಗಿದ್ದರೆ ಯಾವ ಕಾರಣಕ್ಕೂ ವಿಳಂಬ ಮಾಡದೇ ಕೂಡಲೇ ಈ ಸಮುದಾಯದ ಬೇಡಿಕೆಗೆ ಅನುಗುಣವಾಗಿ ಮೀಸಲಾತಿ ಜಾರಿ ಮಾಡುವ ಕುರಿತಾಗಿ ತೀರ್ಮಾನಿಸುತ್ತಿದ್ದೆ,ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ತರುತ್ತೇನೆ ಮತ್ತು ಮುಖ್ಯಮಂತ್ರಿಗಳ ಬಳಿ ಈ ವಿಷಯ ಕುರಿತಾಗಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

14/12/2024 02:17 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ