ಚಿಕ್ಕೋಡಿ: ರಸ್ತೆ ಮೇಲಿನ ಗುಂಡಿಗಳನ್ನು ತಪ್ಪಿಸಲು ಹೋಗಿ ಟ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಅಂಗವಿಕಲ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವಂತ ಘಟನೆ ನಿಪ್ಪಾಣಿ ತಾಲೂಕಿನ ಬೋರಗಾಂವವಾಡಿ ರಸ್ತೆಯಲ್ಲಿ ನಡೆದಿದೆ.
ಭೋಪಾಲ್ ಲಗಮಣ್ಣ ಅಮ್ಮನವರ (77) ಮೃತ ಅಂಗವಿಕಲ ಎಂದು ತಿಳಿದುಬಂದಿದೆ. ಅವರು ಕಾರದಗಾ ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡು ಹಿಂದಿರುಗುವಾಗ ಬೋರಗಾಂವ ಕ್ರಾಸ್ ಬಳಿ ಟ್ರ್ಯಾಕ್ಟರ್'ಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾರೆ. ಇನ್ನೂ ಬೈಕ್ ನ ಹಿಂಭಾಗದಲ್ಲಿ ಕುಳಿತಿದ್ದಂತಹ ಮಕ್ಬೂಲ್ ಗೌಂಡಿ (66) ಈತ ಗಾಯಗೊಂಡಿದ್ದು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್ಐ ಶಿವಕುಮಾರ ಬಿರಾದಾರ್ ಭೇಟಿ ನೀಡಿ ಪ್ರಕರಣದಂತೆ ತನಿಖೆಯನ್ನು ಕೈಗೊಂಡಿದ್ದಾರೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
14/12/2024 03:08 pm