ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯ್ಕುಡೆ ಶ್ರೀ ವಿಠೋಬ ಭಜನಾ ಮಂದಿರದ 66ನೇ ವಾರ್ಷಿಕ ಭಜನಾ ಮಂಗಲೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕ ಸುರೇಶ್ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನಾ ಮಂಗಲೋತ್ಸವ , ಪ್ರಸಾದ ವಿತರಣೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು .
ಸಂದರ್ಭ ಭಜನಾ ಮಂದಿರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ಭಜನಾಮಂದಿರದ ಚತುರ್ಥ ವಾರ್ಷಿಕ ವರ್ಧಂತ್ಯುತ್ಸವ ಜನವರಿ 18 ರಂದು ನಡೆಯಲಿದೆ.
Kshetra Samachara
14/12/2024 03:22 pm